ಕರ್ನಾಟಕ

karnataka

ರಾಯಚೂರು: ಕೋವಿಡ್-19 ಟೆಸ್ಟ್​‌ನಲ್ಲಿ ಶೇ.12ರಷ್ಟು ಪಾಸಿಟಿವ್ ಪ್ರಕರಣ ಪತ್ತೆ

By

Published : Aug 6, 2020, 5:09 PM IST

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಿದ್ದು, ಹೆಚ್ಚಾಗಿ ನಗರ ಪ್ರದೇಶದಲ್ಲಿ ಕಂಡು ಬರುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ತಿಳಿಸಿದರು.

Raichur
ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್

ರಾಯಚೂರು: ಜಿಲ್ಲೆಯ ಸೋಂಕಿತರನ್ನ ಪತ್ತೆ ಹಚ್ಚಲು ನಡೆಸುತ್ತಿರುವ ಕೋವಿಡ್-19 ಟೆಸ್ಟ್​‌ನಲ್ಲಿ ಶೇ.12ರಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಹೇಳಿದ್ದಾರೆ.

ರಾಯಚೂರು: ಕೋವಿಡ್-19 ಟೆಸ್ಟ್​‌ನಲ್ಲಿ ಶೇ.12ರಷ್ಟು ಪಾಸಿಟಿವ್ ಪ್ರಕರಣ ಪತ್ತೆ

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಸೋಂಕಿತರನ್ನ ಕ್ಷಿಪ್ರಗತಿಯಲ್ಲಿ ಪತ್ತೆ ಮಾಡಲು ನಿತ್ಯ ಸಾವಿರ ಜನರಿಗೆ ಟೆಸ್ಟ್ ಮಾಡಲಾಗುತ್ತಿದೆ. ಇದರಲ್ಲಿ ಶೇ.12 ರಷ್ಟು ವರದಿಗಳು ಪಾಟಿಸಿವ್ ಎಂದು ವರದಿಯಾಗುತ್ತಿವೆ. ಜಿಲ್ಲೆಯಲ್ಲಿ ಗುರುತಿಸಲಾಗಿರುವ ಹಾಟ್‌ಸ್ಪಾಟ್​ಗಳಲ್ಲಿ ಕೊರೊನಾ ಟೆಸ್ಟ್ ಮಾಡಲು 17 ಮೊಬೈಲ್ ತಂಡಗಳನ್ನು ರಚನೆ ಮಾಡಲಾಗಿದೆ. ಅಲ್ಲಿಯೇ ತೆರಳಿ ತಪಾಸಣೆ ಮಾಡಲಾಗುತ್ತಿದ್ದು, 750 ರ‍್ಯಾಪಿಡ್ ಆಂಟಿಜನ್ ಹಾಗೂ 250 ಆರ್‌ಟಿಪಿಎಸ್ ಪರೀಕ್ಷೆಗಳನ್ನ ಮಾಡಲಾಗುತ್ತಿದೆ.

ಗ್ರಾಮೀಣ ಭಾಗದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಪತ್ತೆ ಆಗುತ್ತಿದೆ. ಹೆಚ್ಚಾಗಿ ನಗರ ಪ್ರದೇಶದಲ್ಲಿ ಕಂಡು ಬರುತ್ತಿದ್ದಾರೆ. ನಗರ ಪ್ರದೇಶದಲ್ಲಿ ಕೊರೊನಾ ಟೆಸ್ಟ್‌ಗೆ ಒಳಪಡಲು ಹಿಂದೇಟು ಹಾಕುತ್ತಿದ್ದು, ಅವರನ್ನ ಟೇಸ್ಟಿಂಗ್ ಕರೆತರಲು ಬೂತ್ ಮಟ್ಟದಲ್ಲಿ ತಂಡ ರಚನೆ ಮಾಡಲಾಗಿದೆ. ಫಾರ್ಟ್​ಲೈನ್ ವಾರಿಯರ್ಸ್ ಎಂದು ಕರೆಯುವ ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಅವರಿಗೆ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.

ABOUT THE AUTHOR

...view details