ರಾಯಚೂರು:ಕಳೆದ ಡಿ.15ರಂದು ಶಾವಂತಲ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಾಗರ್, ವೀರೇಶ್, ಸುನೀಲ್ ಹಾಗೂ ಬಸವ ಬಂಧಿತ ಆರೋಪಿಗಳು. ಇವರು ಕಳೆದ ಡಿ.15ರಂದು ರಾತ್ರಿ ದೇವದುರ್ಗ ತಾಲೂಕಿನ ಶಾವಂತಗಲ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದರು. ಈ ವೇಳೆ, ಅಮರೇಶ (20) ಎಂಬ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಅಲ್ಲದೇ ಬಿಡಿಸಲು ಬಂದಿದ್ದ ಮೂವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದರು.