ರಾಯಚೂರು:ಕೊರೊನಾ ಸೋಂಕಿನಿಂದ ಮೃತಪಟ್ಟ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಯವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ನಗರಕ್ಕೆ ತರಲಾಗಿದೆ. ಅಂತ್ಯಸಂಸ್ಕಾರವನ್ನು ಕೋವಿಡ್-19 ನಿಯಮಾವಳಿಗಳ ಪ್ರಕಾರ ನೆರವೇರಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ಕೋವಿಡ್ ನಿಯಮಾನುಸಾರ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ
ಕೊರೊನಾ ಸೋಂಕಿನಿಂದ ಮೃತಪಟ್ಟ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅಂತ್ಯಸಂಸ್ಕಾರವನ್ನು ಕೋವಿಡ್-19 ನಿಯಮಾವಳಿಗಳ ಪ್ರಕಾರ ನೆರವೇರಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ಅಶೋಕ್ ಗಸ್ತಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ
ನಗರ ಹೊರವಲಯದ ಪೋತಗಲ್ ಗ್ರಾಮದಲ್ಲಿನ ಸರ್ಕಾರಿ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಇದಕ್ಕಾಗಿ ಜಿಲ್ಲಾಡಳಿತ ಅಂತ್ಯಸಂಸ್ಕಾರದ ಅಗತ್ಯ ಸಿದ್ಧತೆಯನ್ನ ಕೈಗೊಂಡಿದೆ.
ಪಾರ್ಥಿವ ಶರೀರ ರಾಯಚೂರು ನಗರಕ್ಕೆ ಆಗಮಿಸಿದೆ. ಗಸ್ತಿಯವರ ಮನೆಯ ಬಳಿ ನೀರವ ಮೌನ ಆವರಿಸಿದೆ. ಆರ್‌ಟಿಒ ಸರ್ಕಲ್ ಬಳಿ ಅಶೋಕ್ ಗಸ್ತಿಯವರ ಅವರ ಭಾವಚಿತ್ರಕ್ಕೆ ಅಭಿಮಾನಿಗಳು ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
Last Updated : Sep 18, 2020, 11:38 AM IST