ಕರ್ನಾಟಕ

karnataka

ETV Bharat / state

ರಾಯಚೂರು: ಪೊಲೀಸರ ಮೇಲೆ ಹಲ್ಲೆ, ಓರ್ವ ಆರೋಪಿ ಸೆರೆ - ಮಲ್ಲೇಶ್​ ಬಂಧಿತ ಆರೋಪಿ

ಕಳ್ಳತನ ಹಾಗೂ ಪೊಲೀಸರ ಮೇಲೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ.

An accused arrested on assault on Policemen
ಪೊಲೀಸರ ಮೇಲೆ ಹಲ್ಲೆ ಪ್ರಕರಣ

By ETV Bharat Karnataka Team

Published : Jan 12, 2024, 10:43 AM IST

ರಾಯಚೂರು: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆಂದು ತೆರಳಿದ್ದ ಬಳಗಾನೂರು ಠಾಣೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಮಸ್ಕಿ ಪಟ್ಟಣದಲ್ಲಿ ಪೊಲೀಸರು ಸೆರೆ ಹಿಡಿದಿದ್ದಾರೆ. ಮಲ್ಲೇಶ್​ ಬಂಧಿತ ಆರೋಪಿ. ಪ್ರಕರಣದ ಆರು ಆರೋಪಿಗಳ ಪೈಕಿ ಈತನೂ ಒಬ್ಬ. ಪ್ರಕರಣದಲ್ಲಿ ಈತ ಐದನೇ ಆರೋಪಿಯಾಗಿದ್ದಾನೆ.

ಬಳಗಾನೂರ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಮಫ್ತಿಯಲ್ಲಿ ಇಬ್ಬರು ಪೊಲೀಸ್ ಕಾನ್​ಸ್ಟೆಬಲ್​ಗಳು ತೆರಳಿದ್ದರು. ಗುಡದೂರು ಗ್ರಾಮದ ಸಮೀಪ ಬೈಕ್ ತಡೆದು ಇಬ್ಬರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ಆರೋಪಿಗಳು ತಪ್ಪಿಸಿಕೊಂಡು ಮಸ್ಕಿ ಪಟ್ಟಣದ ಕಡೆ ತೆರಳಿದ್ದಾರೆ. ಇವರನ್ನು ಹಿಂಬಾಲಿಸಿಕೊಂಡು ಹೋದ ಪೊಲೀಸರ ಮೇಲೆ ಮಸ್ಕಿ ಪಟ್ಟಣದ ವಾಲ್ಮೀಕಿ ಸರ್ಕಲ್ ಬಳಿ ಆರೋಪಿಗಳು ಕಟ್ಟಿಗೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಗಾಯಗೊಂಡ ಪೊಲೀಸ್ ಕಾನ್​ಸ್ಟೆಬಲ್​ಗಳಾದ ಮಂಜುನಾಥ ಹಾಗೂ ಗೋಪಾಲ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಬಳಗಾನೂರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ಮೂರು ತಂಡಗಳನ್ನು ರಚಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು.

ಆರು ಆರೋಪಿಗಳಲ್ಲಿ 5ನೇ ಆರೋಪಿಯಾಗಿರುವ ಮಲ್ಲೇಶ್​ನನ್ನು ಅರೆಸ್ಟ್ ಮಾಡಿದ್ದು, ಇನ್ನುಳಿದ ಐವರು ಆರೋಪಿಗಳಾದ ದುರ್ಗೇಶ್, ಸಣ್ಣ ದುರ್ಗೇಶ್, ಪರುಶುರಾಮ, ವೆಂಕಟೇಶ, ಶಿವರಾಜ್ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಉದ್ಯಮದಲ್ಲಿ ಎತ್ತರಕ್ಕೆ ಬೆಳೆಯುತ್ತಿರುವ ಅಸೂಯೆ; ಮಾಲೀಕನ ಪತ್ನಿ ಕೊಲೆ ಮಾಡಿದ್ದ ಆರೋಪಿ ಬಂಧನ

ABOUT THE AUTHOR

...view details