ರಾಯಚೂರು: ಕೊರೊನಾ ವೈರಸ್ ತಡೆ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಕೋವಿಡ್ ಲಸಿಕೆ ಹಾಕಿಸುವಲ್ಲಿ ಅಸಹಕಾರ ತೋರಿದ ಗ್ರಾ ಪಂ ಸದಸ್ಯರಿಬ್ಬರಿಗೆ ಸಹಾಯಕ ಆಯುಕ್ತ ಸಂತೋಷ ಕಾಮಗೌಡ ನೋಟಿಸ್ ಜಾರಿಗೊಳಿಸಿದ್ದಾರೆ.
ತಾಲೂಕಿನ ಗಿಲ್ಲೆಸೂಗೂರು ಗ್ರಾ ಪಂ ಸದಸ್ಯರಾದ ಮಲ್ಲೇಶ ಹಾಗೂ ರಂಗಪ್ಪಗೆ ನೋಟೀಸ್ ಜಾರಿ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹತೋಟಿಗೆ ಸದಸ್ಯರನ್ನು ಒಳಗೊಂಡಂತೆ ಗ್ರಾ.ಪಂ. ಮಟ್ಟದ ಕಾರ್ಯಪಡೆ ರಚಿಸಲಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಹಾಗೂ ಜನರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.