ಲಿಂಗಸುಗೂರು:ಜಿಲ್ಲೆಯಾದ್ಯಂತ ಕೊರೊನಾ ಪ್ರಕರಣಗಳಿಗೆ ಸಂಬಂಧಿಸಿ ಆಯಾ ತಾಲೂಕು ಕೇಂದ್ರಗಳಲ್ಲಿಯೇ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮಿಕಾಂತರೆಡ್ಡಿ ತಿಳಿಸಿದ್ದಾರೆ.
ಶುಕ್ರವಾರ ಲಿಂಗಸುಗೂರಿಗೆ ಭೇಟಿ ನೀಡಿದ್ದ ಅವರು, ಭವಿಷ್ಯದಲ್ಲಿ ಕೊರೊನಾ ಲಕ್ಷಣಗಳಿಗೆ ಸಂಬಂಧಿಸಿ ಸ್ಥಳೀಯವಾಗಿ ಪರೀಕ್ಷಿಸಲು ಫೀವರ್ ಕ್ಲಿನಿಕ್, ಐಸೋಲೇಷನ್ ವಾರ್ಡ್, ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಿ, ಅನ್ಯ ಜಿಲ್ಲೆ, ರಾಜ್ಯ, ವಿದೇಶಗಳಿಂದ ಬರುವವರಿಗೆ ಸ್ಥಳೀಯವಾಗಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುವುದು ಎಂದರು.