ರಾಯಚೂರು :ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಜಾಗೃತಿ ಜಾಗೃತಿ ಜಾಥಾ ನಡೆಸಲಾಯ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್ ಆಸ್ಪತ್ರೆ ಹಾಗೂ ನವೋದಯ ಮೆಡಿಕಲ್ ಕಾಲೇಜು ವತಿಯಿಂದ ಆಯೋಜಿಸಿದ್ದ ಕ್ಷಯರೋಗ ಜಾಥಾಕ್ಕೆ ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ. ಸುರೇಂದ್ರ ಬಾಬು ಅವರು ಚಾಲನೆ ನೀಡಿದರು.
ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ - undefined
ವಿಶ್ವ ಕ್ಷಯರೊಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ
ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭಗೊಂಡ ಜಾಥಾ ನಗರದ ವಿವಿಧ ವೃತ್ತಗಳ ಮೂಲಕ ಸಂಚಾರ ನಡೆಸಿ ಕ್ಷಯ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲಾಯ್ತು. ಈ ಸಂದರ್ಭದಲ್ಲಿ ಐಎಂಎ ಅಧ್ಯಕ್ಷ ಡಾ.ಮಹಾಲಿಂಗಪ್ಪ, ಡಾ. ಬಸವರಾಜ ಎಂ.ಪಾಟೀಲ್, ಡಾ. ಅನಿರುದ್ಧ ಕುಲಕರ್ಣಿ, ಡಾ.ಇಂದರ್ ರಾಜ್ ಇಟಗಿ, ಡಾ. ರಾಜಶೇಖರ, ಡಾ. ಪತ್ತಾರ್, ಡಾ.ಶ್ಯಾಮ ಸುಂದರ್, ಡಾ. ನಾಗರಾಜ್, ಡಿ.ಎ. ಬಿರಾದರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.