ರಾಯಚೂರು: ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ, ನೆರೆ ಹಾವಳಿ ಹಾಗೂ ತುಂಗಭದ್ರ ಮೂಲಕ ರೈತರಿಗೆ ಸಮರ್ಪಕ ನೀರು ಒದಗಿಸಲು ಹಾಗೂ ನೆರೆ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದನ್ನು ವಿರೋಧಿಸಿ ಸೆಪ್ಟಂಬರ್ 16ರಂದು ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಹೇಳಿದರು.
ನೆರೆ ಪರಿಹಾರ, ಸಮರ್ಪಕ ನೀರು ಪೂರೈಕೆಗೆ ಒತ್ತಾಯ: ನಾಳೆ ರಾಯಚೂರಲ್ಲಿ ಪ್ರತಿಭಟನೆಗೆ ಕರೆ - ನೆರೆ ಹಾವಳಿ
ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಇಡಿ, ಐಟಿಗಳ ಮೂಲಕ ಕಾಂಗ್ರೆಸ್ ನಾಯಕರನ್ನು ಹಣಿಯುವ ಕಾರ್ಯ ನಡೆಯುತ್ತಿದೆ. ಇದನ್ನು ವಿರೋಧಿಸಿ ರಾಯಚೂರು, ಮಾನ್ವಿಯಲ್ಲಿ ಸೆಪ್ಟಂಬರ್ 16ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು
ನೆರೆ ಹಾವಳಿ ಸಂತ್ರಸ್ತರಿಗೆ ಸಮರ್ಪಕವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ. ಐಟಿ, ಇಡಿಗಳ ಮೂಲಕ ಬಿಜೆಪಿ ದ್ವೇಷದ ರಾಜಕಾರಣದಲ್ಲಿ ಮುಳುಗಿದೆ. ಇನ್ನೊಂದೆಡೆ ದೇಶದ ಆರ್ಥಿಕತೆ ಬಿಕ್ಕಟ್ಟಿಗೆ ಸಿಲುಕಿದೆ ಎಂದು ಕುಟುಕಿದರು.