ಕರ್ನಾಟಕ

karnataka

ಅನರ್ಹರಿಗೆ ಬಿಜೆಪಿ ಮಣೆ:  'ಕಾಡಾ' ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ರಾಜೀನಾಮೆ

By

Published : Nov 25, 2019, 8:40 AM IST

ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಬಸವನಗೌಡ ತುರವಿಹಾಳ, ಬಿಜೆಪಿಯಲ್ಲಿ ಉಂಟಾದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಸ್ವಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಡಾ ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ರಾಜೀನಾಮೆ

ರಾಯಚೂರು : ಇತ್ತೀಜೆಗಷ್ಟೆ ಕೊಪ್ಪಳದ ಮುನಿರಾಬಾದ್​ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಮಂಡಳಿ(ಕಾಡಾ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಮಸ್ಕಿಯ ಬಸವನಗೌಡ ತುರವಿಹಾಳ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೊಪ್ಪಳದ ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಮಂಡಳಿ(ಕಾಡಾ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಬಸವನಗೌಡ, ಬಿಜೆಪಿಯಲ್ಲಿ ಉಂಟಾದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಸ್ವಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ.

ಕಾಡಾ ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ರಾಜೀನಾಮೆ

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಬಸವನಗೌಡ, ಕಾಂಗ್ರೆಸ್​ನ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧ 213 ಮತಗಳಿಂದ ಸೋಲು ಅನುಭವಿಸಿದ್ದರು. ಆದ್ರೆ ಚುನಾವಣೆಯಲ್ಲಿ ಅಕ್ರಮ ಮತದಾನವಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗುವ ಮೂಲಕ ಹೈಕೋರ್ಟ್ ನಲ್ಲಿ ಧಾವೆ ಹಾಕಿದ್ದರು.

ಇದೀಗ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್​​, ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಅವರ ಪರ ಪ್ರಚಾರ ಮಾಡುವ ಅನಿವಾರ್ಯತೆ ಎದುರಾಗಿದೆ. ಇನ್ನೂ ಪ್ರತಾಪಗೌಡ ವಿರುದ್ದ ದೂರನ್ನು ವಾಪಸ್​ ಪಡೆಯುವಂತೆ ಬಿಜೆಪಿ ನಾಯಕರು ಒತ್ತಡ ಹಾಕುತ್ತಿದ್ದಾರೆ ಎಂಬ ಮಾತುಗಳು ಕೂಡಾ ಕೇಳಿಬರುತ್ತಿವೆ.

ರಾಜೀನಾಮೆ ಪ್ರತಿ

ಬಿಜೆಪಿಗೆ ಸೇರ್ಪಡೆಯಾಗಿರುವ ಪ್ರತಾಪಗೌಡಗೆ ಬೈ ಎಲೆಕ್ಷನ್ ಟಿಕೆಟ್ ನೀಡುವ ಮೂಲಕ ಗೆಲ್ಲಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಬಿಜೆಪಿ ಸರ್ಕಾರ ಬಸವನಗೌಡಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಿತ್ತು. ಆದ್ರೆ ಬಸವನಗೌಡರ ಬೆಂಬಲಿಗರು ಅಧ್ಯಕ್ಷ ಸ್ಥಾನ ಸ್ವೀಕರಿಸಿದಂತೆ ಒತ್ತಡ ಹಾಕಿ, ಪ್ರತಿಭಟನೆ ನಡೆಸಿದ್ದರು. ಬಿಜೆಪಿ ವರಿಷ್ಠರ ಒತ್ತಡಕ್ಕೆ ಮಣಿದ ಬಸವನಗೌಡ ಅಧ್ಯಕ್ಷ ಸ್ಥಾನ ಸ್ವೀಕರಿಸಿದ್ದರು.

ಸದ್ಯ ಬಿಜೆಪಿ ರಾಜಕೀಯ ಬೆಳವಣಿಗೆಯಿಂದ ಟಿಕೆಟ್​ ಕಳೆದುಕೊಂಡಿರುವ ಬಸನಗೌಡ ಕಾಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.. ಸದ್ಯ ಬಸವನಗೌಡ ತುರವಿಹಾಳ ರಾಜೀನಾಮೆ ಪ್ರಸಹನದಿಂದ ರಾಜಕೀಯದಲ್ಲಿ ಬಾರಿ ಸಂಚಲನ ಮೂಡಿಸಿದ್ದು, ಇದಕ್ಕೆ ರಾಜ್ಯ ಬಿಜೆಪಿ ನಾಯಕರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.

TAGGED:

ABOUT THE AUTHOR

...view details