ರಾಯಚೂರು: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ತಾಲೂಕಿನಲ್ಲಿ ನಡೆದಿದೆ.
ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು, ಇನ್ನಿಬ್ಬರಿಗೆ ಗಾಯ - ವಾಹನ ಅಪಘಾತ
ಹೆಗ್ಗಸನಹಳ್ಳಿ ಗ್ರಾಮದ ಬಳಿ 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರಿಗೆ ಗಾಯಗಳಾಗಿವೆ.
![ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು, ಇನ್ನಿಬ್ಬರಿಗೆ ಗಾಯ Bike accident in raichur; one died](https://etvbharatimages.akamaized.net/etvbharat/prod-images/768-512-8915721-thumbnail-3x2-rcr.jpg)
ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ, ಇನ್ನಿಬ್ಬರಿಗೆ ಗಾಯ!
ಬೈಕ್ ಅಪಘಾತ
ತಾಲೂಕಿನ ಹೆಗ್ಗಸನಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ರವಿಕುಮಾರ(34) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಲ್ಲಿಕಾರ್ಜುನಗೆ ತೀವ್ರ ಸ್ವರೂಪವಾಗಿ ಗಾಯಗೊಂಡಿದ್ದು, ಮತ್ತೊಬ್ಬರಿಗೂ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡ ಮಲ್ಲಿಕಾರ್ಜುನನನ್ನು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮತ್ತೋರ್ವ ಗಾಯಾಳುವಿಗೆ ರಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಘಟನೆಯ ಕುರಿತು ರಾಯಚೂರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.