ರಾಯಚೂರು :ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಕೇರ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಅರಕೇರ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸವಾರ ಸಾವು
ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರಾ ಗ್ರಾಮದಲ್ಲಿ ದುರ್ಘಟನೆ ಜರುಗಿದೆ. ಬೈಕ್ನಲ್ಲಿ ವೇಗವಾಗಿ ಹೋಗುವಾಗ ರಸ್ತೆಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಘಟನೆ ನಡೆದಿದೆ. ಮೊತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತವ್ಯಕ್ತಿಯನ್ನು ದೇವದುರ್ಗ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.