ಕರ್ನಾಟಕ

karnataka

ETV Bharat / state

ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಬೈಕ್​ ಸವಾರ ಸಾವು - ರಾಯಚೂರಿನಲ್ಲಿ ಬೈಕ್​ ಸವಾರ ಸ್ಥಳದಲ್ಲಿಯೇ ಸಾವು

ದೇವದುರ್ಗ ತಾಲೂಕಿನ ರೇಖಲಾಮರಡಿ ಗ್ರಾಮದ ಬಳಿ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

bike accident in raichur
ರಾಯಚೂರಿನಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

By

Published : May 19, 2020, 8:51 PM IST

ರಾಯಚೂರು: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿ ಘಟನೆ ದೇವದುರ್ಗ ತಾಲೂಕಿನ ರೇಖಲಾಮರಡಿ ಗ್ರಾಮದ ಬಳಿ ನಡೆದಿದೆ.

ಕಮಲಾಪುರ ಗ್ರಾಮದ ನಿವಾಸಿ ದೊಡ್ಡ ವೆಂಕಟೇಶ್ (35) ಮೃತಪಟ್ಟಿದ್ದು, ಹಿಂಬದಿ ಸಾವರ ಶಿವಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾದೆ. ಇಬ್ಬರು ರಾಯಚೂರು ತಾಲೂಕಿನ ಕಮಲಾಪುರ ಗ್ರಾಮದಿಂದ ದೇವದುರ್ಗ ತಾಲೂಕಿನ ಪಿಲ್ಲಿಗುಂಡ ಗ್ರಾಮದಲ್ಲಿನ ಸಂಬಂಧಿಕರ ಮನೆಗೆ ಬೈಕ್ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಅಪರಿಚಿತ ವಾಹನ ಬೈಕ್​​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​​​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿಯ ಸವಾರನಿಗೆ ಗಂಭೀರ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ದೇವದುರ್ಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ABOUT THE AUTHOR

...view details