ರಾಯಚೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಓರ್ವ ಮಹಿಳೆ ಸಾವು, ಇಬ್ಬರು ಗಂಭೀರ - ರಾಯಚೂರುನಲ್ಲಿ ಬೈಕ್ ಅಪಘಾತ
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಅಲ್ಕೋಡ್ ಗ್ರಾಮದ ಬಳಿ ನಡೆದಿದೆ.
![ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಓರ್ವ ಮಹಿಳೆ ಸಾವು, ಇಬ್ಬರು ಗಂಭೀರ bike accident in raichuru](https://etvbharatimages.akamaized.net/etvbharat/prod-images/768-512-5269928-thumbnail-3x2-rcr.jpg)
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ
ದೇವದುರ್ಗ ತಾಲೂಕಿನ ಅಲ್ಕೋಡ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ನಿಲುವಜಿ ಗ್ರಾಮದ ಸರಸ್ವತಿ(60) ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಿಂಗಪ್ಪ ಹಾಗೂ 2 ವರ್ಷ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.