ರಾಯಚೂರು: ಬೈಕ್ ಚಾಲನೆ ವೇಳೆ ಆಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ .
ಬೈಕ್ ಓಡಿಸುವಾಗ ಆಯತಪ್ಪಿ ಬಿದ್ದು ಸವಾರ ಸಾವು - kannadanews
ಬೈಕ್ ಓಡಿಸುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ಬೈಕ್ ಓಡಿಸುವಾಗ ಆಯತಪ್ಪಿ ಬಿದ್ದು ಸವಾರ ಸಾವು
ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಬಳಿ ಈ ಘಟನೆ ನಡೆದಿದೆ. ನರಸಣ್ಣ (24) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಆಯತಪ್ಪಿ ಬಿದ್ದ ವೇಳೆ ಗಂಭೀರ ಗಾಯಗೊಂಡಿದ್ದ ನರಸಣ್ಣನನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.