ರಾಯಚೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು - bike rider death
ರಾಯಚೂರು ಜಿಲ್ಲೆಯ ಸಿರಿವಾರ ಬಳಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಅಪಘಾತ
ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಕಲ್ಲೂರು ಗ್ರಾಮದ ಎಂ.ಡಿ.ಇದಾಯತ್ ಪಾಷಾ (22) ಮೃತ ಬೈಕ್ ಸವಾರನೆಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಸಿರವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.