ರಾಯಚೂರು/ವಿಜಯಪುರ:ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ ಹಿನ್ನೆಲೆಯಲ್ಲಿ ರಾಯಚೂರು ಮತ್ತು ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೆ ಮಾಡಿಕೊಂಡು ಸಂಭ್ರಮಿಸಿದರು. ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿಯ 12 ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸುವ ಮೂಲಕ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಈ ವೇಳೆ ಮಾತನಾಡಿದ ಶಾಸಕ ಡಾ. ಶಿವರಾಜ್ ಪಾಟೀಲ್, ಈ ಫಲಿತಾಂಶ ವಿಪಕ್ಷಗಳಿಗೆ ಉತ್ತರ ನೀಡುವ ಮೂಲಕ ಸ್ಥಿರ ಸರ್ಕಾರಕ್ಕೆ ಜೈ ಎಂದಿದ್ದಾರೆ.