ಕರ್ನಾಟಕ

karnataka

ETV Bharat / state

ಮಸ್ಕಿ ಉಪಚುನಾವಣೆ: ಕೈ-ಕಮಲ ನಾಯಕರಿಂದ ಅಬ್ಬರದ ಪ್ರಚಾರ - ಆರ್.ಬಸವನಗೌಡ ತುರವಿಹಾಳ

ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ.

BJP and Congress leaders Campaign
ಕೈ-ಕಮಲ ನಾಯಕರಿಂದ ಅಬ್ಬರದ ಪ್ರಚಾರ

By

Published : Apr 8, 2021, 11:02 AM IST

ರಾಯಚೂರು:ಜಿಲ್ಲೆಯಲ್ಲಿ ಮಸ್ಕಿ ವಿಧಾನಸಭಾ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪಣ ತೊಟ್ಟಿದ್ದು, ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ರಾಯಚೂರಿನಲ್ಲಿ ಕೈ-ಕಮಲ ನಾಯಕರಿಂದ ಎಲೆಕ್ಷನ್ ಕ್ಯಾಂಪೇನ್

ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳು ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಚುನಾವಣೆ ನಡೆಯಲಿದೆ. ಇದಕ್ಕಾಗಿ ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಾಯಕರು ಗೆಲುವಿಗಾಗಿ ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಎರಡು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಪೈಕಿ, ಮಸ್ಕಿ ವಿಧಾನಸಭಾ ಕ್ಷೇತ್ರ ಹೆಚ್ಚು ಗಮನ ಸೆಳೆಯುತ್ತಿದೆ. ಪ್ರತಾಪ್ ಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪರಿಣಾಮ 2021ರ ಏಪ್ರಿಲ್​ 17ರಂದು ಚುನಾವಣೆ ನಡೆಯಲಿದೆ.

ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್, ಕಾಂಗ್ರೆಸ್​ನಿಂದ ಆರ್.ಬಸವನಗೌಡ ತುರವಿಹಾಳ ಕಣದಲ್ಲಿದ್ದಾರೆ. ಈ ಇಬ್ಬರು ಅಭ್ಯರ್ಥಿಗಳು ಕಳೆದ ಬಾರಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಈ ಬಾರಿ ಅಭ್ಯರ್ಥಿಗಳ ಪಕ್ಷ ಅದಲು-ಬದಲಾಗಿದೆ. ಕಳೆದ ಬಾರಿ ಕಾಂಗ್ರೆದ್​ನಿಂದ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್, 213 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಕಮಲ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜ್ಯದಲ್ಲಿ ಯಡಿಯೂರಪ್ಪ ಅಧಿಕಾರ ಚುಕ್ಕಾಣಿ ಹಿಡಿಯಲು ನೆರವಾಗಿದ್ದರು. ಹೀಗಾಗಿ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಸ್ಕಿ ಹತ್ತಿರದ ಮುದಗಲ್ ಪಟ್ಟಣ ಹೊರವಲಯದಲ್ಲಿ ವಾಸ್ತವ್ಯ ಹೂಡಿ, ತಮ್ಮ ಅಭ್ಯರ್ಥಿ ಗೆಲ್ಲಿಸಲು ರಣತಂತ್ರ ರೂಪಿಸುತ್ತಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಒಂದು ಸುತ್ತಿನ ಬೃಹತ್ ಕಾರ್ಯಕ್ರಮ ನಡೆಸಿದ್ದಾರೆ. ಸದ್ಯ, ಕ್ಷೇತ್ರಾದ್ಯಂತ ಶಾಸಕರು, ನಿಗಮ-ಮಂಡಳಿ ಅಧ್ಯಕ್ಷರು, ಸಚಿವರುಗಳು ಮತಬೇಟೆ ನಡೆಸುತ್ತಿದ್ದಾರೆ.

ಇತ್ತ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರೋಡ್ ಶೋ ಹಾಗೂ ಪ್ರಚಾರ ಸಭೆ ನಡೆಸಿ ಅಭ್ಯರ್ಥಿ ಬಸವನಗೌಡ ತುರುವಿಹಾಳ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ದುಡ್ಡಿನ ಆಸೆಗೆ ಪಕ್ಷ ದ್ರೋಹ, ಕ್ಷೇತ್ರದ ಜನತೆ ಮೋಸ ಮಾಡಿರುವ ಪ್ರತಾಪ್ ಗೌಡ ಪಾಟೀಲ್​ಗೆ ಬುದ್ದಿ ಕಲಿಸಲು ಕಾಂಗ್ರೆಸ್​ನ ಅಭ್ಯರ್ಥಿಗೆ ಮತ ನೀಡಿ ಎಂದು ಮತಯಾಚನೆ ಮಾಡುತ್ತಿದ್ದಾರೆ. ಪಾಮನಕಲ್ಲೂರು ಗ್ರಾಮದ ಹೊರವಲಯದಲ್ಲಿ ನಡೆಸುತ್ತಿರುವ ನೀರಾವರಿ ಹೋರಾಟ ಸಮಿತಿಯಿಂದ ಎನ್ಆರ್ ಬಿಸಿ 5ಎ ಕಾಲುವೆ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲಿಸಿ, ಯೋಜನೆ ಜಾರಿಗೆ ಭರವಸೆ ನೀಡಿದೆ.

ಇದನ್ನೂ ಓದಿ:ಹಠ ಹಿಡಿದರೆ ಬಿಗಿ ಕ್ರಮ: ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆ

ABOUT THE AUTHOR

...view details