ರಾಯಚೂರು:ಸಿಎಂ ಬದಲಾವಣೆ ಆಡಿಯೋ ವೈರಲ್ ಆಗಿರುವುದರ ಬಗ್ಗೆ ಹೆಚ್ಚು ಪ್ರಾಮುಖ್ಯತೆ ನೀಡುವುದು ಅವಶ್ಯವಿಲ್ಲವೆಂದು ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಿಯೋ ವಿಚಾರವಾಗಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಧ್ವನಿ ನನ್ನದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಡಿಯೋ ವೈರಲ್ ಆಗಿರುವುದಕ್ಕೆ ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿ ಪತ್ರ ಬರೆಯುವುದಾಗಿ ಸಹ ತಿಳಿಸಿದ್ದಾರೆ. ಇನ್ನುಳಿದ ಅಧಿಕಾರವಾಧಿಯಲ್ಲಿ ಬಿ ಎಸ್ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದರು.