ರಾಯಚೂರು: ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ರೆ ನಾನು ಒಂದು ಕಡೆಯ ಮೀಸೆ ಬೋಳಿಸುವುದಾಗಿ ಜಿಲ್ಲೆಯ ದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ನಾಯಕ ಬಹಿರಂಗ ಸವಾಲು ಹಾಕಿದ್ದಾರೆ.
ಅ.11ರಂದು ಗಿಲ್ಲೆಸೂಗೂರಿನಲ್ಲಿ ನಡೆಯಲಿರುವ ಜನಸಂಕಲ್ಪ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಹಗಲುಗನಸು ಕಾಣುತ್ತಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಏಳು ಸೀಟ್ನಲ್ಲಿ ಏಳಕ್ಕೆ ಏಳು ಗೆದ್ದು ಬಿಡ್ತೀವಿ ಅಂತಾರೆ. ಆದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಮೂರು ಸೀಟ್ ಗೆದ್ದರೆ, ನಾನು ಒಂದು ಕಡೆಯ ಮೀಸೆ ಬೋಳಿಸಿಕೊಳ್ಳುತ್ತೇನೆ ಎಂದು ಕೈ ನಾಯಕರಿಗೆ ಸವಾಲು ಹಾಕಿದರು.