ರಾಯಚೂರು:ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಸಂಗಣ್ಣ ಕರಡಿ ಪರ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಬಿರುಸಿನ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆಯಿಂದ ತಿರಸ್ಕೃತಗೊಂಡು ಕಡಿಮೆ ಸ್ಥಾನಗಳನ್ನು ಪಡೆದ ಜೆಡಿಎಸ್ ಸರ್ಕಾರ ನಡೆಸುತ್ತಿದೆ. ಆದರೆ, 104 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ವಿರೋಧ ಪಕ್ಷದಲ್ಲಿ ಕುಳಿತಕೊಳ್ಳುವ ಪರಿಸ್ಥಿತಿ ಉಂಟಾಯಿತು ಎಂದರು.