ರಾಯಚೂರು: ಕೊರೊನಾ ಲಕ್ಷಣ ಕಂಡು ಬಂದ ಹಿನ್ನೆಲೆ ಜಿಲ್ಲೆಯಲ್ಲಿ ಇಂದು ಹೊಸದಾಗಿ 11 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಗಂಟಲು ದ್ರವ ಪರೀಕ್ಷೆಗೆ ರವಾನೆ ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 115 ಜನರ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಅದರಲ್ಲಿ 72 ಜನರ ವರದಿ ನೆಗೆಟಿವ್ ಬಂದಿದ್ದು, ಇನ್ನೂ 43 ವರದಿ ಬಾಕಿ ಇವೆ.
ಪಕ್ಕದ ತೆಲಂಗಾಣ ಹಾಗೂ ಆಂಧ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಿಲ್ಲೆಗೆ ಆಗಮಿಸುತ್ತಿರುವುದರಿಂದ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಶುಕ್ರವಾರ 74 ಜನರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.
ಇದರಿಂದಾಗಿ ಒಟ್ಟು 398 ಜನರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಒಟ್ಟು 29 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.