ರಾಯಚೂರು: ಜಿಲ್ಲೆಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದ್ದು, ಯಾರು ಎಂದು ಗುರುತಿಸಲು ಸಾಧ್ಯವಾಗುತ್ತಿಲ್ಲ. ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ ಎಂದು ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಕೊಲೆ ಶಂಕೆ - ಸಿಂಧನೂರು ತಾಲೂಕಿನ ಹೊಲ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹೊಲದಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಜಿಲ್ಲೆಯ ಸಿಂಧನೂರು ತಾಲೂಕಿನ ಹೊಲದಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆಯ ಶವ ಇಂದು ಪತ್ತೆಯಾಗಿದೆ. ದೇಹದ ಬಹುತೇಕ ಭಾಗ ಸುಟ್ಟು ಹೋಗಿದ್ದು, ತುಂಡು ಬಟ್ಟೆ ಮಾತ್ರ ದೊರೆತಿದೆ. ಸದ್ಯ ಮರೋಣೋತ್ತರ ಪರೀಕ್ಷೆಗೆಂದು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಮಾಹಿತಿ ಸಿಗಲಿದೆ.
ಇದುವರೆಗೆ ಮಹಿಳೆ ನಾಪತ್ತೆಯಾಗಿರುವ ಬಗ್ಗೆ ಯಾವುದೇ ದೂರು ಸಹ ದಾಖಲಾಗಿಲ್ಲ. ಸದ್ಯ ಅಸ್ವಾಭಾವಿಕ ಸಾವು ಎಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.