ರಾಯಚೂರು:ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್‌ನಿಂದ ರಾಯಚೂರು ಜಿಲ್ಲೆಗೆ ಯಾವುದೇ ಎಫೆಕ್ಟ್ ಆಗಲಾರದು ಎಂದು ಹೇಳಲಾಗುತ್ತಿದೆ.
ರಾಯಚೂರು ಜಿಲ್ಲೆಯಲ್ಲಿ ನಾಳೆ ಬಂದ್ ಇರಲ್ವಂತೆ.. - Sarojini Mahishi Report
ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್‌ನಿಂದ ರಾಯಚೂರು ಜಿಲ್ಲೆಗೆ ಯಾವುದೇ ಎಫೆಕ್ಟ್ ಆಗಲಾರದು ಎಂದು ಹೇಳಲಾಗುತ್ತಿದೆ.
ಕನ್ನಡ ಪರ ಸಂಘಟನೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸರೋಜಿನಿ ಮಹಿಷಿ ವರದಿಯನ್ನ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿವೆ. ಆದರೆ, ಜಿಲ್ಲೆಯಲ್ಲಿ ಈವರೆಗೆ ಬಂದ್‌ಗೆ ಸಂಬಂಧಿಸಿದಂತೆ ಯಾವುದೇ ಸಿದ್ಧತೆ ನಡೆದಿಲ್ಲ. ಅಲ್ಲದೇ, ಬಂದ್ ಬೆಂಬಲಿಸುವಂತೆ ಕನ್ನಡ ಪರ ಸಂಘಟನೆಗಳು ಸಹ ಮನವಿ ಸಲ್ಲಿಸಿಲ್ಲ. ಹೀಗಾಗಿ, ನಾಳೆ ಕರೆ ನೀಡಿರುವ ಬಂದ್‌ನಿಂದ ಯಾವುದೇ ಎಫೆಕ್ಟ್ ಆಗುವ ಸಾಧ್ಯತೆ ಕಡಿಮೆ.
ಜಿಲ್ಲಾಡಳಿತದ ಸಹ ಈವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಆದರೆ, ಬಂದ್ ಹಿನ್ನೆಲೆಯಲ್ಲಿ ಕೇವಲ ಸಾಂಕೇತಿಕ ಮನವಿ ಪತ್ರ ಸಲ್ಲಿಸುವ ಸಾಧ್ಯತೆಯಿದೆ.