ರಾಯಚೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವಿಗೀಡಾದ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.
ಟೈರ್ ಸ್ಫೋಟಗೊಂಡು ಕಾರು ಪಲ್ಟಿ: ಓರ್ವ ಸಾವು - ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವು
ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಟೈರ್ ಸ್ಫೋಟಗೊಂಡು ಕಾರು ಪಲ್ಟಿ
ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ವೆಂಕಟೇಶ್ ಹೀರಾ(50) ಮೃತ ದುರ್ದೈವಿ. ಮತ್ತೊಬ್ಬ ಪ್ರಯಾಣಿಕ ವೀರೇಶ ಎಂಬುವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಲಹಳ್ಳಿಯಿಂದ ರಾಯಚೂರು ಕಡೆಗೆ ಬರುವಾಗ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ. ತೀವ್ರವಾಗಿ ಗಾಯಗೊಂಡ ವೆಂಕಟೇಶ್ ಹಾಗೂ ವೀರೇಶ ಎಂಬುವವರನ್ನು ಆಸ್ಪತ್ರೆಗೆ ರವಾನಿಸುವ ವೇಳೆ ವೆಂಕಟೇಶ್ ಸಾವಿಗೀಡಾಗಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.