ರಾಯಚೂರು:ರಾಯಚೂರು ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು-ಬೈಕ್ ನಡುವೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲಿ ಸಾವು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ.. - undefined
ರಾಯಚೂರಿನ ಶಕ್ತಿನಗರದಲ್ಲಿ ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ರೇ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತಕ್ಕೀಡಾದ ಕಾರು
ತಾಲೂಕಿನ ಶಕ್ತಿನಗರದ ಎಂಪಿಸಿಎಲ್ ಬಳಿ ಈ ಅಪಘಾತ ಸಂಭವಿಸಿದೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ನಿವಾಸಿ ಕಿಶಾನರಾವ್(40) ಎಂಬಾತ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಕಾರ್‌ನಲ್ಲಿದ್ದ ನಾಲ್ವರ ಪೈಕಿ ಸೂಗುರೇಶ, ಅನಂತ ಎಂಬಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.ಈ ಕುರಿತು ರಾಯಚೂರಿನ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.