ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಸಿಂಗಸನಹಳ್ಳ ಬಳಿ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಬೈಕ್ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು - ಬೈಕ್ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು
ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಸ್ಕಿ ತಾಲೂಕಿನ ಸಿಂಗಸನಹಳ್ಳ ಬಳಿ ನಡೆದಿದೆ.
ಬೈಕ್ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು
ದುರಗಪ್ಪ ಕಾರ್ಲಕುಂಟಿ (22) ಮೃತ ಬೈಕ್ ಸವಾರ. ದುರಗಪ್ಪ ಮಸ್ಕಿಯಿಂದ ಕಾಟಗಲ್ ತೆರಳುತ್ತಿದ್ದ ವೇಳೆ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರು ಚಾಲಕ ಸ್ಥಳದಲ್ಲಿಯೇ ಕಾರು ಬಿಟ್ಟು ಪರಾರಿಯಾಗಿದ್ದು, ಮೃತನ ತಂದೆ ಬಸಪ್ಪ ಕಾರ್ಲಕುಂಟಿ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಿಪಿಐ ಬೂಸರೆಡ್ಡಿ ದೀಪಕ್, ಪಿಎಸ್ಐ ವೀರೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.