ಕರ್ನಾಟಕ

karnataka

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 49 ಜನರ ಮೇಲೆ ಬಿತ್ತು ಕೇಸ್

By

Published : Jul 1, 2020, 12:50 PM IST

ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಮ್​ನಿಂದ 990 ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಇದರ ಜೊತೆಗೆ ಹೊರರಾಜ್ಯದಿಂದ ಬಂದವರು, ಸೋಂಕಿತರ ಸಂಪರ್ಕದಲ್ಲಿದ್ದವರಿಗೆ 14 ದಿನಗಳ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ.

ಕ್ವಾರಂಟೈನ್ ನಿಯಮ ಉಲ್ಲಂಘಸಿದ 49 ಜನರ ಮೇಲೆ ಬಿತ್ತು ಕೇಸ್
ಕ್ವಾರಂಟೈನ್ ನಿಯಮ ಉಲ್ಲಂಘಸಿದ 49 ಜನರ ಮೇಲೆ ಬಿತ್ತು ಕೇಸ್

ರಾಯಚೂರು:ಜಿಲ್ಲೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 49 ಜನರ ವಿರುದ್ಧ ಕೇಸ್ ದಾಖಲಾಗಿದ್ದು, 5,249 ಜನರಿಗೆ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಮ್​ನಿಂದ 990 ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ. ಹಾಗೂ ಹೊರರಾಜ್ಯದಿಂದ ಬಂದವರು, ಸೋಂಕಿತರ ಸಂಪರ್ಕದಲ್ಲಿದ್ದವರಿಗೆ 14 ದಿನಗಳ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ.

ಜಿಲ್ಲಾಡಳಿತ ಪ್ರಕಟಣೆ

ಕ್ವಾರಂಟೈನ್​​ನಲ್ಲಿರುವ ಎಲ್ಲರಿಗೂ ಕ್ವಾರಂಟೈನ್​ ವಾಚ್​ ಆ್ಯಪ್​ ಅಪ್‍ಲೋಡ್ ಮಾಡಿಕೊಡಲಾಗುತ್ತದೆ. ಜಿಯೋ ಫೆನ್ಸಿಂಗ್ ಬ್ರೀಚಿಂಗ್‌ನಲ್ಲಿ ನಿಯಮ ಉಲ್ಲಂಘಿಸಿದರೆ ಮಾಹಿತಿ ಸಿಗುತ್ತದೆ. ಈ ಮಾಹಿತಿ ಆಧರಿಸಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಈಗ 3,764 ಜನ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details