ರಾಯಚೂರು: ಕೊರೊನಾ ಆತಂಕದ ನಡುವೆಯೂ ಇಂದಿನಿಂದ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ಪ್ರಾರಂಭವಾಗಿವೆ.
ಇಂದು ಮತ್ತೆ ನಾಳೆ ನಡೆಯುವ ಪರೀಕ್ಷೆಗೆ ಜಿಲ್ಲಾಡಳಿತ ಅಗತ್ಯ ಕ್ರಮ ವಹಿಸಿ ಪರೀಕ್ಷೆಯನ್ನು ಆರಂಭಿಸಿದೆ. ಜಿಲ್ಲೆಯ14 ಪರೀಕ್ಷಾ ಕೇಂದ್ರಗಳಲ್ಲಿ 4,440 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಯಚೂರಿನ 10 ಕೇಂದ್ರದಲ್ಲಿ 2,904 ವಿದ್ಯಾರ್ಥಿಗಳು, ಸಿಂಧನೂರಿನ 2 ಕೇಂದ್ರದಲ್ಲಿ 936 ವಿದ್ಯಾರ್ಥಿಗಳು, ಲಿಂಗಸುಗೂರಿನ 2 ಕೇಂದ್ರದಲ್ಲಿ 500 ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ.
ರಾಯಚೂರಿನಲ್ಲಿ ಸಿಇಟಿ ಪರೀಕ್ಷೆ ಆರಂಭ ಪರೀಕ್ಷಾ ಕೇಂದ್ರದ ಸುತ್ತಲೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಮಾಸ್ಕ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಬಳಕೆ ಮಾಡಲಾಗುತ್ತಿದೆ.
ಸೋಂಕಿತ ವಿದ್ಯಾರ್ಥಿಗಳಿಗಾಗಿ ರಾಯಚೂರಿನ ಯರಮರಸ್, ಸಿಂಧನೂರು, ಲಿಂಗಸೂಗೂರಿನಲ್ಲಿ ಪರೀಕ್ಷಾ ಕೇಂದ್ರ ಗುರುತು ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ಜಿಲ್ಲಾಡಳಿತ ನಿಯೋಜಿಸುವ ಮೂಲಕ ಪರೀಕ್ಷೆ ಆರಂಭಿಸಿದೆ.