ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಚಂದ್ರಶೇಖರ್ ಹಿರೇಮಠ ಅಮಾನತ್ತುಗೊಳಿಸಿ ಆದೇಶಿಸಿಲಾಗಿದೆ.
ಕರ್ತವ್ಯಲೋಪ ಆರೋಪ: ಚಂದ್ರಶೇಖರ ಹಿರೇಮಠ ಅಮಾನತುಗೊಳಿಸಿ ರಾಯಚೂರು ಡಿಸಿ ಆದೇಶ - ರಾಯಚೂರಿನಲ್ಲಿ ಕಾಂಗ್ರೆಸ್ ಪ್ರಚಾರ ಸುದ್ದಿ
ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಆರೋಪದಡಿ ಚಂದ್ರಶೇಖರ ಹಿರೇಮಠರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಆದೇಶಿಸಿದ್ದಾರೆ.
ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ ಶರಣಪ್ಪ ಮಟ್ಟೂರು ಪರವಾಗಿ ಕೆಲ ದಿನಗಳ ಹಿಂದೆ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು. ಸಿಂಧನೂರು ತಾಲೂಕು ಪಂಚಾಯಿತಿನ ಅಕ್ಷರ ದಾಸೋಹ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕಾರಾಗಿ ಚಂದ್ರಶೇಖರ ಹಿರೇಮಠ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದಾಗಿಯೂ ಕಾಂಗ್ರೆಸ್ ಪರವಾಗಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ಜೆಡಿಎಸ್ ಆರೋಪಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ದೂರಿನ ಆಧಾರದ ಮೇಲೆ ಚಂದ್ರಶೇಖರ ಹಿರೇಮಠರನ್ನ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಕರ್ತವ್ಯ ಲೋಪವೆಸಗಿರುವ ಆರೋಪದಡಿ ಅಮಾನತ್ತು ಮಾಡಿ ಆದೇಶಿಸಿದ್ದಾರೆ.