ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು 10ನೇ ಚಾತುರ್ಮಾಸದ ದೀಕ್ಷೆಯನ್ನು ಇಂದು ಸ್ವೀಕರಿಸಿದರು. ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಚಾತುರ್ಮಾಸದಲ್ಲಿ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ನಿತ್ಯ ಹಮ್ಮಿಕೊಳ್ಳಲಾಗುತ್ತದೆ. ಈ ಬರುವ ತಿಂಗಳು 351 ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು.
ಇನ್ನು ದೇಶ, ವಿದೇಶ, ರಾಜ್ಯಗಳಲ್ಲಿ ಜಿಲ್ಲೆಗಳಲ್ಲಿ ಸೇರಿದಂತೆ ಮಂತ್ರಾಲಯ ಮಠದ ಶಾಖಾ ಮಠಗಳಲ್ಲಿ ಮೂಲ ಬೃಂದಾವನ ಸ್ಥಳಗಳಲ್ಲಿ ಚಾತುರ್ಮಾಸದಲ್ಲಿ ವಿಶೇಷವಾದ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಮಠದ ಶಿಷ್ಯರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದ್ದಾರೆ.