ರಾಯಚೂರು:ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಡೆದಿದೆ.
ರಾಯಚೂರಿನಲ್ಲಿ ಬಾಲ್ಯ ವಿವಾಹ: ಮಕ್ಕಳ ರಕ್ಷಣಾ ಘಟಕದಿಂದ ತಡೆ - ಮಕ್ಕಳ ರಕ್ಷಣಾ ಘಟಕ
ಉಡಮಗಲ್ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ತಡೆಯಲಾಗಿದೆ. ಮಕ್ಕಳ ರಕ್ಷಣಾ ಇಲಾಖೆಯಿಂದ ದಾಳಿ ನಡೆಸಿ ಬಾಲಕಿಯನ್ನು ವಶಕ್ಕೆ ಪಡೆದುಕೊಂಡಿದ್ಧಾರೆ.
ಮಕ್ಕಳ ರಕ್ಷಣಾ ಇಲಾಖೆ
ಚೈಲ್ಡ್ ಲೈನ್ನಲ್ಲಿ ಬಂದ ದೂರಿನ ಮೇರೆಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಬಾಲ್ಯ ವಿವಾಹವನ್ನು ನಿಲ್ಲಿಸಿದರು. ತಾಲೂಕಿನ ಉಡಮಗಲ್ ಗ್ರಾಮದಲ್ಲಿ 16 ವರ್ಷದ ಬಾಲಕಿಗೆ ವಿವಾಹ ನಿಶ್ಚಯ ಮಾಡಲಾಗಿತ್ತು. ಆದ್ರೆ ದೂರು ಬಂದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಘಟಕ ಸಿಬ್ಬಂದಿ ದಾಳಿ ಮಾಡಿ ಬಾಲ್ಯವಿವಾಹವನ್ನು ತಡೆದು, ಬಾಲಕಿಯನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.