ರಾಯಚೂರು: ಕೆಲ ದಿನಗಳ ಹಿಂದೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಂಶಯಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಆರೋಪಿ ಸುದರ್ಶನ್ ಯಾದವ್ ವಿಚಾರಣೆ ನಡೆಸಲು ವಶಕ್ಕೆ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿ ಸಂಶಯಾಸ್ಪದ ಸಾವು ಪ್ರಕರಣ: ಆರೋಪಿ ಸಿಐಡಿ ವಶಕ್ಕೆ, ತನಿಖೆ ಚುರುಕು - ಸಿಐಡಿ
ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಂಶಯಾಸ್ಪದ ಸಾವು ಪ್ರಕರಣದ ಆರೋಪಿಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 4 ದಿನ ವಿಚಾರಣೆ ನಡೆಸಲಿದ್ದಾರೆ.
ನಗರದ ಜೆಎಂಎಫ್ಸಿ ಮೂರನೇ ನ್ಯಾಯಾಲಯ ಆರೋಪಿಯನ್ನ ಸಿಐಡಿಗೆ ನೀಡಲು ಆದೇಶಿಸಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ ಮತ್ತು ಅತ್ಯಾಚಾರ ಆರೋಪದ ಮೇಲೆ ಸುದರ್ಶನ್ ಯಾದವ್ ನ್ಯಾಯಾಂಗ ಬಂಧನದಲ್ಲಿದ್ದ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹತ್ತು ದಿನ ವಶಕ್ಕೆ ನೀಡಲು ಸಿಐಡಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸತ್ತು. ಆದ್ರೆ ನಾಲ್ಕು ದಿನ ವಶಕ್ಕೆ ಪಡೆದು ವಿಚಾರಣೆ ನಡೆಸಲು ಕೋರ್ಟ್ ಆದೇಶಿಸಿದೆ.
ನ್ಯಾಯಲಯದ ಆದೇಶದ ಹಿನ್ನೆಲೆ ಸಿಐಡಿ ಅಧಿಕಾರಿಗಳು ಆರೋಪಿಯನ್ನ ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಲು ಮುಂದಾಗಿದ್ದು, ತನಿಖೆಯನ್ನ ಮತ್ತೊಷ್ಟು ಚುರುಕುಗೊಳಿಸಿದ್ದಾರೆ.