ಕರ್ನಾಟಕ

karnataka

ETV Bharat / state

ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ವೇಳೆ ಗಲಾಟೆ, ಜನರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಗ್ರಾಮಸ್ಥರ ಒತ್ತಾಯ - raichur clash between people in Devadurga taluk

ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರ ಹಾಳಾಜಾಡಲದಿನ್ನಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದಿದೆ. ಅದೇ ದಿನ ತಡರಾತ್ರಿ ಬುದ್ದಿನ್ನಿ ಗ್ರಾಮದ ಜನರ ಮೇಲೆ ಹಲ್ಲೆ ನಡೆದಿದ್ದು, ಗ್ರಾಮಸ್ಥರು ಹಲ್ಲೆ ನಡೆಸಿದವರನ್ನು ಹಿಡಿದು ತರುವಂತೆ ಒತ್ತಾಯಿಸಿದರು.

raichur
ಬುದ್ದಿನ್ನಿ ಗ್ರಾಮದ ಜನರ ಮೇಲೆ ಹಲ್ಲೆ

By

Published : Feb 6, 2021, 2:00 PM IST

ರಾಯಚೂರು:ಜಿಲ್ಲೆಯಲ್ಲಿ ಶುಕ್ರವಾರ ಹಾಳಾಜಾಡಲದಿನ್ನಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದ ದಿನದಂದೇ ಬುದ್ದಿನ್ನಿ ಗ್ರಾಮದ ಜನರ ಮೇಲೆ ಹಲ್ಲೆ ನಡೆದಿದೆ.

ದೇವದುರ್ಗ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಜನರ ಮೇಲೆ ಹಲ್ಲೆ ನಡೆದಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಗಲಾಟೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರ ಜೀಪ್​ನ್ನು ಅಡ್ಡಗಟ್ಟಿ ಮಹಿಳೆಯರು ಪ್ರತಿಭಟನೆ ನಡೆಸಿ ಹಲ್ಲೆ ನಡೆಸಿದವರನ್ನು ಹಿಡಿದು ತರುವಂತೆ ಒತ್ತಾಯಿಸಿದರು.

ABOUT THE AUTHOR

...view details