ರಾಯಚೂರು: ಕಾಂಗ್ರೆಸ್, ಬಿಜೆಪಿ ಮಧ್ಯೆ ಪೈಪೋಟಿ ನಡೆಯುತ್ತಿದೆ. ಈ ಎರಡು ಪಕ್ಷಗಳಿಗಿಂತ ವಿಭಿನ್ನವಾಗಿ ಜೆಡಿಎಸ್ ಪಕ್ಷ ಮುಂದೆ ಹೋಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚ ರತ್ನ ಯೋಜನೆ ಜಾರಿಗೆ ತರುತ್ತೇವೆ. ಈ ಯೋಜನೆಯನ್ನ ರಾಜ್ಯದ ಜನರ ಮುಂದೆ ಇಟ್ಟಿದ್ದು, ಪ್ರವಾಸ ಮಾಡುತ್ತೇವೆ. ಭಯ ಮುಕ್ತ, ಹಸಿವು ಮುಕ್ತ ಕರ್ನಾಟಕ ಮಾಡುವ ಸಂಕಲ್ಪ ಹೊಂದಿದ್ದೇವೆ. ನಾವು ಕೆಲಸ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಜನತೆಗೆ ವಾಗ್ದಾನ ಮಾಡುತ್ತಿದ್ದೇವೆ. ಯಾವುದೇ ರಾಜಕೀಯ ಪಕ್ಷ ಇದುವರೆಗೂ ಈ ರೀತಿಯ ವಾಗ್ದಾನ ಮಾಡಿಲ್ಲ. ಜೊತೆಗೆ ರಾಜ್ಯದ ರೈತರ ಹಿತದೃಷ್ಟಿಯಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಜಾರಿಯಲ್ಲಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.
ಇದನ್ನೂ ಓದಿ:ಅವರದ್ದು ಖಡಕ್ ಸರ್ಕಾರ, ಇವರದ್ದು ಬೈಠಕ್ ಸರ್ಕಾರ: ರಾಷ್ಟ್ರೀಯ ಪಕ್ಷಗಳ ವಿರುದ್ಧ ಸಿಎಂ ಇಬ್ರಾಹಿಂ ಟೀಕೆ