ಕರ್ನಾಟಕ

karnataka

ETV Bharat / state

ರಾಯಚೂರು ಅಭಿವೃದ್ಧಿಗೆ 3000 ಕೋಟಿ ರೂ. ಅನುದಾನ: ಸಿಎಂ ಕುಮಾರಸ್ವಾಮಿ - undefined

ಗ್ರಾಮ ವಾಸ್ತವ್ಯಕ್ಕೆ ಕರೆಗುಡ್ಡಕ್ಕೆ ತೆರಳುವ ಮೊದಲು ಸುದ್ದಿಗೋಷ್ಟಿ ನಡೆಸಿದ ಸಿಎಂ, ಜಿಲ್ಲೆಯ ಅಭಿವೃದ್ಧಿಗೆ 3000 ಕೋಟಿ ರೂ. ಅನುದಾನ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಕರೆಗುಡ್ಡಕ್ಕೆ ತೆರಳುವ ಮೊದಲು ಸುದ್ದಿಗೋಷ್ಠಿ ನಡೆಸಿದ ಸಿಎಂ

By

Published : Jun 26, 2019, 10:46 AM IST

ರಾಯಚೂರು: ನಾನು ಕೇವಲ ಗ್ರಾಮ ವಾಸ್ತವ್ಯಕ್ಕೆ ಬಂದಿಲ್ಲ. ಜಿಲ್ಲೆಯ ಶಾಸಕರು, ಸಂಸದರು ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲೆಯ ಅಭಿವೃದ್ಧಿ ಕುರಿತು ಈಗಾಗಲೇ ಚರ್ಚಿಸಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ 3000 ಕೋಟಿ ರೂ. ಅನುದಾನ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಗ್ರಾಮ ವಾಸ್ತವ್ಯಕ್ಕೆ ಕರೆಗುಡ್ಡಕ್ಕೆ ತೆರಳುವ ಮುನ್ನ ಸುದ್ದಿಗೋಷ್ಟಿ ನಡೆಸಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳು, ಅಧಿಕಾರಿಗಳ ಜೊತೆ ಚರ್ಚಿಸಿ ನೀಲನಕ್ಷೆ ತಯಾರಿಸಲಾಗುವುದು. ಯಾವುದಕ್ಕೆ ಆದ್ಯತೆ ಕೊಡಬೇಕೆಂದು ಚರ್ಚಿಸುತ್ತೇನೆ. 3000 ಕೋಟಿ ರೂ. ಹಣ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದರು.

ಇನ್ನು ರಾಯಚೂರು ವಿಶ್ವವಿದ್ಯಾಲಯ ಆರಂಭಕ್ಕೆ ಸುಗ್ರಿವಾಜ್ಞೆ ಹೊರಡಿಸಿದ್ದೇವೆ. ರಾಜ್ಯಪಾಲರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಬಸ್ ದರ ಏರಿಕೆ ಪ್ರಸ್ತಾವನೆ ಇತ್ತು. ಆದರೆ, ಬಸ್ ಸೌಕರ್ಯಕ್ಕೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಬಸ್​ಗಳು ನಷ್ಟದಲ್ಲಿವೆ. ಆ ಬಸ್​ಗಳನ್ನು ಇತರೆ ಜಿಲ್ಲೆಗಳಿಗೆ ನೀಡಲು ಚಿಂತನೆ ನಡೆದಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದರು.

ಕರೆಗುಡ್ಡಕ್ಕೆ ತೆರಳುವ ಮೊದಲು ಸುದ್ದಿಗೋಷ್ಟಿ ನಡೆಸಿದ ಸಿಎಂ

ರಾಯಚೂರು ಜಿಲ್ಲೆಯ ನೀರಾವರಿ ಸೌಲಭ್ಯಕ್ಕೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ತುಂಗಭದ್ರಾ ಡ್ಯಾಂ ನ ಹೂಳು ತೆಗೆಯುವ ಬದಲಾಗಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಎನ್​ಆರ್​ಬಿಸಿ ಆಧುನೀಕರಣಕ್ಕೆ ಅನುದಾನ ನೀಡಲಾಗಿದೆ. ಸಾಲಮನ್ನಾ ಯೋಜನೆಗೆ ಹಣ ನೀಡಿದ್ದರೂ ಬೇರೆ ಇಲಾಖೆಗಳಿಗೆ ಹಣದ ಕೊರತೆ ಮಾಡಿಲ್ಲ. ಸಾಲಮನ್ನಾ ಬಗ್ಗೆ ಅಪನಂಬಿಕೆ ಇಲ್ಲವೆಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಶಿವನಗೌಡ ನಾಯಕ್​ಗೆ ತಿರುಗೇಟು:

ಬಿಜೆಪಿ ಶಾಸಕ ಶಿವನಗೌಡ ನಾಯಕ್​ ಪಾದಯಾತ್ರೆ ಕೇವಲ ಗಿಮಿಕ್ ಎಂದು ಟೀಕಿಸಿದ ಸಿಎಂ ಕುಮಾರಸ್ವಾಮಿ ಅವರು, ಶಾಸಕ ಶಿವನಗೌಡ ಈಗ್ಯಾಕೆ ಪಾದಯಾತ್ರೆ ಮಾಡುತ್ತಾರೆ. ಈಗ ದಂಡು ಕರೆದುಕೊಂಡು ಬಂದು ಯುದ್ಧಾ ಮಾಡ್ತಾರಾ ಎಂದು ಪ್ರಶ್ನಿಸಿದರು. ಅಭಿವೃದ್ಧಿ ಕೇವಲ 3 ಜಿಲ್ಲೆ ಮತ್ತು ನಮ್ಮ ಕುಟುಂಬಕ್ಕೆ ಸೀಮಿತವಾಗಿಲ್ಲ. ಮುಖ್ಯಮಂತ್ರಿಯಾಗಿ ಇಡೀ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ಸರ್ಕಾರ 2 ತಿಂಗಳು, 3 ತಿಂಗಳ ಎಂದು ಹೇಳುತ್ತಿದ್ದಿರಿ. ಆದ್ರೆ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲವೆಂದು ಸಿಎಂ ತಿರುಗೇಟು ನೀಡಿದರು.

For All Latest Updates

TAGGED:

ABOUT THE AUTHOR

...view details