ರಾಯಚೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಾರ್ವವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಕುರಿತಾಗಿ ಭರವಸೆ ನೀಡಿತು, ಕೇಂದ್ರ ಸರ್ಕಾರದ ಆರೋಗ್ಯ ಸಚಿವರಿಗೆ ಕೊಟ್ಟ ಭರವಸೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವನ್ನು ಬರೆದಿದ್ದಾರೆ. ಇದು 401 ದಿನಗಳಿಂದ ಅನಿರ್ದಿಷ್ಟಾವಧಿ ಕೈಗೊಂಡಿರುವ ಹೋರಾಟಕ್ಕೆ ಬಲ ಬಂದಿದೆ.
ಹೌದು.., ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ನಗರದ ಮಹಾತ್ಮಗಾಂಧಿ ಪುತ್ಥಳಿ ಬಳಿ ಏಮ್ಸ್ ಹೋರಾಟ ಸಮಿತಿ 401 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತ ಬಂದಿದೆ. ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸರ್ಕಾರ ಬಂದರೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಘೋಷಣೆ ಮಾಡಿತ್ತು.
ಇದೀಗ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ನುಡಿದಂತೆ ನಡೆಯುತ್ತೇವೆ ಎಂದು ಇತ್ತೀಚೆಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜ ಅವರು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ್ದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಕುರಿತಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಅವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಅರ್ಟಿಕಲ್ 371 ಯೋಜನೆಯಡಿ ರಾಯಚೂರು ಜಿಲ್ಲೆಯಿದೆ. ಇಲ್ಲಿನ ಜನರ ಆರೋಗ್ಯ ಹಾಗೂ ಶಿಕ್ಷಣ, ತಲಾ ಆದಾಯದ ವಿಷಯದಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಹಿಂದುಳಿದ ಪ್ರದೇಶ. ಅತಿಹೆಚ್ಚು ಬಿಸಿಲಿನ ತಾಪಮಾನ ಇರುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಎದುರಾಗುತ್ತಿವೆ. ಹೀಗಾಗಿ ಜಿಲ್ಲೆಯ ಜನರ ಆರೋಗ್ಯದ ರಕ್ಷಣೆ ನೀಡಿನಲ್ಲಿ ಉತ್ತಮ ವೈದ್ಯಕೀಯ ಸಂಸ್ಥೆ ಸ್ಥಾಪನೆ ಅವಶ್ಯಕತೆಯಿದೆ. ಅಲ್ಲದೇ ಏಮ್ಸ್ ಸ್ಥಾಪನೆಗೆ ಬೇಡಿಕೆಯನ್ನು ಮುಂದಿಟ್ಟುಕೊಂಡು ಹಲವು ದಿನಗಳಿಂದ ಇಂದಿನವರೆಗೆ ಏಮ್ಸ್ ಹೋರಾಟ ಸಮಿತಿ ನಿರಂತರ ಪ್ರತಿಭಟನೆ ನಡೆಸುತ್ತಿದೆ. ಏಮ್ಸ್ ಸ್ಥಾಪಿಸುವ ಕುರಿತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಪತ್ರವನ್ನು ಬರೆದಿದ್ದಾರೆ.