ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡದಲ್ಲಿ ಇಂದು ನಡೆಯಲಿರುವ ಜನತಾ ದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಬೆಳಗ್ಗೆ ಉದ್ಯಾನ ಎಕ್ಸ್‌ಪ್ರೆಸ್ ರೈಲಿನ ಮೂಲಕ ರಾಯಚೂರಿಗೆ ಆಗಮಿಸಿದರು.
ಸಿಎಂ ಗ್ರಾಮ ವಾಸ್ತವ್ಯ: ರಾಯಚೂರಲ್ಲಿ ಸಚಿವರು, ಅಧಿಕಾರಿಗಳಿಂದ ಸಮಸ್ಯೆಗಳ ಕುರಿತು ಹೆಚ್ಡಿಕೆ ಚರ್ಚೆ - undefined
ಸಿಎಂ ಕುಮಾರಸ್ವಾಮಿ ಇಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡದಲ್ಲಿ ನಡೆಯಲಿರುವ ಜನತಾ ದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉದ್ಯಾನ ಎಕ್ಸ್‌ಪ್ರೆಸ್ ರೈಲಿನ ಮೂಲಕ ರಾಯಚೂರಿಗೆ ಬಂದಿಳಿದಿದ್ದಾರೆ. ಬಳಿಕ ಅವರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.
ಬಳಿಕ ನಗರದ ಹೊರವಲಯದ ಸಕ್ಯೂರ್ಟ್ ಹೌಸ್ನಲ್ಲಿ ಜಿಲ್ಲೆಯ ಸಚಿವರು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಸೇರಿದಂತೆ ಜಿಲ್ಲಾಧಿಕಾರಿ, ಸಿಇಓ, ವಲಯ ಐಜಿ ಹಾಗೂ ವಿವಿಧ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆಯುತ್ತಿದ್ದಾರೆ.
ಸಿಎಂ ನಗರದ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ ನಾಡಗೌಡ ಬರಮಾಡಿಕೊಂಡರು. ಈ ವೇಳೆ ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ್, ಜಿಲ್ಲಾಧಿಕಾರಿ ಶರತ್, ಐಜಿಪಿ, ಜಿಪಂ ಸಿಇಒ, ಎಸ್ಪಿ ಸೇರಿದಂತೆ ಇನ್ನಿತರ ಶಾಸಕರು, ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.