ರಾಯಚೂರು: ಮಸ್ಕಿ ಉಪಚುನಾವಣೆ ಹಿನ್ನೆಲೆ ಇಂದು ಮತ್ತು ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರ ಮತಬೇಟೆ ನಡೆಸಲಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೂ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಸ್ಕಿ ವಿಧಾನಸಭಾ ಕ್ಷೇತ್ರದ 3 ಜಿ.ಪಂ ವ್ಯಾಪ್ತಿಯಲ್ಲಿ ಭರ್ಜರಿ ಮತ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ತುರುವಿಹಾಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ತಿಡಿಗೋಳ, ಗುಂಡಾ, ಉಮಲೂಟಿ, ಕಲಮಂಗಿ, ಬಪ್ಪೂರು, ವಿರುಪಾಪುರ, ಗುಂಜಳ್ಳಿ ಹಾಗೂ ತುರುವಿಹಾಳ ಗ್ರಾಮಗಳಲ್ಲಿ ಮತಬೇಟೆ ನಡೆಸಲಿದ್ದಾರೆ.