ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ಮತ್ತು ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಲಿಂಗಸುಗೂರಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)ದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಭೂ ಸುಧಾರಣೆ, ಎಪಿಎಂಸಿ ಸೇರಿದಂತೆ ಕಾರ್ಮಿಕ ಕಾಯ್ದೆ ತಿದ್ದುಪಡಿ ಮೂಲಕ ಹೊರಡಿಸಿದ ಸುಗ್ರೀವಾಜ್ಞೆ ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಪ್ರತಿಭಟನೆ ನಡೆಸಿದೆ.
ಭಾರತ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ
ಕೋವಿಡ್ ಸೋಂಕಿನ ಸಮಯದಲ್ಲಿ ಸರ್ಕಾರ ಭೂ ಸುಧಾರಣೆ, ಎಪಿಎಂಸಿ ಸೇರಿದಂತೆ ಕಾರ್ಮಿಕ ಕಾಯ್ದೆ ತಿದ್ದುಪಡಿ ಮೂಲಕ ಹೊರಡಿಸಿದ ಸುಗ್ರೀವಾಜ್ಞೆ ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಆದಾಯ ತೆರಿಗೆ ಪಾವತಿಸದ ಕುಟುಂಬಕ್ಕೆ ಮಾಸಿಕ 7,500 ರೂ. ಪರಿಹಾರ ನೀಡಬೇಕು. ಪ್ರತೀ ಕುಟುಂಬಕ್ಕೆ 10 ಕೆಜಿ ಪಡಿತರ ವಿತರಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಪಟ್ಟಣ ಪ್ರದೇಶಕ್ಕೂ ವಿಸ್ತರಣೆ ಮಾಡುವುದು ಸೇರಿದಂತೆ ರೈತರ, ಕಾರ್ಮಿಕರ ಹಿತರಕ್ಷಣೆಗೆ ಮುಂದಾಗುವಂತೆ ಆಗ್ರಹಿಸಿದರು.