ರಾಯಚೂರು:ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿಯೂ ದೂರು ಸಲ್ಲಿಕೆಯಾಗಿದೆ.
ಸೋಮಶೇಖರ್ ರೆಡ್ಡಿ ವಿರುದ್ಧ ಸಿಂಧನೂರಿನಲ್ಲೂ ದೂರು ದಾಖಲು.. - sindhanuru Complaint against MLA Somashekar reddy
ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಯಚೂರು ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿಯೂ ದೂರು ಸಲ್ಲಿಕೆಯಾಗಿದೆ.
ಸೋಮಶೇಖರ್ ರೆಡ್ಡಿ ವಿರುದ್ಧ ದೂರು
ಸೋಮಶೇಖರ್ ರೆಡ್ಡಿ ವಿರುದ್ದ ದಲಿತ, ಅಲ್ಪಸಂಖ್ಯಾತರ ಪರವಾಗಿ ನಾಗರಾಜ ಪೂಜಾರ್ ಎಂಬುವರು ದೂರು ನೀಡಿದ್ದಾರೆ. ದೂರು ಸಲ್ಲಿಸಿದ ಮುಖಂಡರು ಈ ಬಗ್ಗೆ ಪ್ರತಿಕ್ರಿಯಿಸಿ, ಸೋಮಶೇಖರ್ ರೆಡ್ಡಿಯವರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದು ಸರಿಯಲ್ಲ. ಅವರನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ರೀತಿ ಹೇಳಿಕೆ ನೀಡಿ ಅಶಾಂತಿ, ಅರಾಜಕತೆ ಸೃಷ್ಟಿಸಲು ಮುಂದಾಗಿರುವುದು ಖಂಡನೀಯ. ಕೂಡಲೇ ಅವರ ಮೇಲೆ ಕ್ರಮಕೈಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.