ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮೂರು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಎರಡನೇ ದಿನವಾದ ಇಂದು ನಗರ ಸಂಪೂರ್ಣ ಸ್ತಬ್ಧವಾಗಿದೆ.
ಮೇ 16 ರಿಂದ 18ರ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಈ ವೇಳೆ ಇಂದು ಕೆಲವರು ಅಂಗಡಿ ತೆರೆಯಲು ಯತ್ನಿಸಿದಾಗ ಸ್ಥಳಕ್ಕಾಗಮಿಸಿದ ಪೊಲೀಸರು ಖಡಕ್ ಸೂಚನೆ ನೀಡಿ ಅಂಗಡಿಗಳನ್ನು ಮುಚ್ಚಿಸಿದರು. ಜೊತೆಗೆ, ಅನಗತ್ಯವಾಗಿ ರಸ್ತೆಗೆ ಇಳಿದ ಕೆಲವರಿಗೆ ಲಾಠಿ ರುಚಿ ತೋರಿಸಿ ಮನೆಗೆ ಕಳುಹಿಸಿದ್ದಾರೆ.