ಕರ್ನಾಟಕ

karnataka

ETV Bharat / state

ಮಸ್ಕಿ : ಮತಗಟ್ಟೆ ಬಳಿ ಪೊಲೀಸರು ಹಾಗೂ ಕಾಂಗ್ರೆಸ್​​ ಕಾರ್ಯಕರ್ತರ ನಡುವೆ ವಾಗ್ವಾದ - ಮಸ್ಕಿ ವಿಧಾನಸಭೆ ಉಪಚುನಾವಣೆ ಮತದಾನ

ಮಸ್ಕಿ ತಾಲೂಕಿನ ಕುರುಕುಂದಾ ಗ್ರಾಮದಲ್ಲಿ ಮತಗಟ್ಟೆ ಹತ್ತಿರ ಬಿಜೆಪಿ ಕಾರ್ಯಕರ್ತರನ್ನ ಬಿಡುತ್ತಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತೆ ಪದ್ಮಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ಮಧ್ಯೆ ವಾಗ್ವಾದ ಉಂಟಾಯಿತು.

ಮತಗಟ್ಟೆ ಹತ್ತಿರ ಪೊಲೀಸರು ಹಾಗೂ ಕಾಂಗ್ರೆಸ್​​ ಕಾರ್ಯಕರ್ತರು ನಡುವೆ ವಾಗ್ವಾದ
ಮತಗಟ್ಟೆ ಹತ್ತಿರ ಪೊಲೀಸರು ಹಾಗೂ ಕಾಂಗ್ರೆಸ್​​ ಕಾರ್ಯಕರ್ತರು ನಡುವೆ ವಾಗ್ವಾದ

By

Published : Apr 17, 2021, 12:58 PM IST

Updated : Apr 17, 2021, 1:12 PM IST

ರಾಯಚೂರು : ಮಸ್ಕಿ ವಿಧಾನಸಭೆ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಕುರುಕುಂದಾ ಗ್ರಾಮದಲ್ಲಿ ಪೊಲೀಸರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ ನಡೆಸಿರುವ ಘಟನೆ ನಡೆದಿದೆ.

ಪೊಲೀಸರು ಹಾಗೂ ಕಾಂಗ್ರೆಸ್​​ ಕಾರ್ಯಕರ್ತರ ನಡುವೆ ವಾಗ್ವಾದ

ಮಸ್ಕಿ ತಾಲೂಕಿನ ಕುರುಕುಂದಾ ಗ್ರಾಮದಲ್ಲಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರನ್ನ ಬಿಡುತ್ತಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತೆ ಪದ್ಮಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನ ದೂರ ಕಳಿಸಿ, ಬಿಜೆಪಿ ಕಾರ್ಯಕರ್ತರಿಗೆ ಮತಗಟ್ಟೆ ಹತ್ತಿರ ಹೋಗಲು ಅವಕಾಶ ನೀಡುತ್ತಿದ್ದಿರಿ ಎಂದು ಪೊಲೀಸರ ಜೊತೆ ಕಾಂಗ್ರೆಸ್ ಕಾರ್ಯಕರ್ತೆ ಪದ್ಮಾವತಿ ವಾಗ್ವಾದಕ್ಕಿಳಿದರು. ಈ ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಓದಿ : ಉಪಚುನಾವಣೆ LIVE UPDATES: ಎಂಇಎಸ್ ಅಭ್ಯರ್ಥಿಗೆ ಮತ ಹಾಕುವ ವಿಡಿಯೋ ವೈರಲ್

Last Updated : Apr 17, 2021, 1:12 PM IST

ABOUT THE AUTHOR

...view details