ರಾಯಚೂರು: ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಲು ಮಾಡಿದ ಪ್ರಯೋಗ ವಿಫಲವಾಗಿದೆ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಬಿ.ವಿ.ನಾಯಕ ಹೇಳಿದ್ದಾರೆ.
ಚುನಾವಣೆ ಎದುರಿಸಲು ಮಾಡಿದ ಮೈತ್ರಿ ಪ್ರಯೋಗ ವಿಫಲ:ಬಿ.ವಿ.ನಾಯಕ - undefined
ಲೋಕಸಭೆ ಚುನಾವಣೆಯಲ್ಲಿ ನಮ್ಮ ನಿರೀಕ್ಷೆ ಮೀರಿ ವ್ಯತಿರಿಕ್ತ ಫಲಿತಾಂಶ ಬಂದಿದೆ.ಜನರ ಮನಸ್ಸು ಬಹಳಷ್ಟು ಸೂಕ್ಷ್ಮವಾಗಿದೆ ಎನ್ನುವುದು ಈ ಫಲಿತಾಂಶದಿಂದ ತಿಳಿದುಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಬಿ.ವಿ.ನಾಯಕ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಮ್ಮ ನಿರೀಕ್ಷೆ ಮೀರಿ ವ್ಯತಿರಿಕ್ತ ಫಲಿತಾಂಶ ಹೊರಬಂದಿದೆ.ಜನರ ಮನಸ್ಸು ಬಹಳಷ್ಟು ಸೂಕ್ಷ್ಮವಾಗಿದೆ ಎನ್ನುವುದು ಈ ಫಲಿಂತಾಶದಿಂದ ತಿಳಿದುಕೊಳ್ಳಬೇಕಾಗಿದೆ. ಜನರು ಕಾಂಗ್ರೆಸ್ನಿಂದ ದೂರ ಹೋಗುತ್ತಿದ್ದಾರೆ ಎಂಬುದು ತಿಳಿದು ಬರುತ್ತಿದೆ. ಜನರು ನೀಡಿರುವ ಈ ತೀರ್ಪನ್ನು ನಾವು ಸ್ವೀಕರಿಸುತ್ತೇವೆ ಎಂದರು.
ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ 371 ಜೆ ಕಲಂ ಜಾರಿಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿತ್ತು. ಆದರೆ ಜನರು ನಮ್ಮಿಂದ ಇನ್ನೂ ಹೆಚ್ಚು ನೀರಿಕ್ಷೆಯಿಟ್ಟಿದ್ದರಿಂದ ಬಿಜೆಪಿಗೆ ಅವಕಾಶ ಕಲ್ಪಿಸಿದ್ದಾರೆ. ಜನರ ನಿರೀಕ್ಷೆಯಂತೆ ಬಿಜೆಪಿ ಕೆಲಸ ಮಾಡುತ್ತಾ ಎನ್ನುವುದನ್ನು ಕಾದು ನೋಡಬೇಕಾಗಿದೆ ಎಂದು ಹೇಳಿದರು.