ರಾಯಚೂರು: ದೆಹಲಿ ಜಾಮೀಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ಖಂಡಿಸಿ ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಮೇಣದಬತ್ತಿ ಹಿಡಿದ ಮೌನ ಪ್ರತಿಭಟನೆ ನಡೆಸಿದ್ರು.
ಜಾಮೀಯಾ ವಿವಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ.. - ಜಾಮೀಯಾ ಕಾಲೇಜು ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಸುದ್ದಿ
ದೆಹಲಿಯ ಜಾಮೀಯಾ ವಿವಿ ವಿದ್ಯಾರ್ಥಿಗಳ ಮೇಲಿನ ಪೊಲೀಸರ ಹಿಂಸಾಚಾರ ಖಂಡಿಸಿ ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸಿತು.
![ಜಾಮೀಯಾ ವಿವಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ.. protest](https://etvbharatimages.akamaized.net/etvbharat/prod-images/768-512-5418015-thumbnail-3x2-surya.jpg)
ಕಾಂಗ್ರೆಸ್ ಮೌನ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರಿಂದ ಮೌನ ಪ್ರತಿಭಟನೆ..
ನಗರದ ಮಹಾತ್ಮ ಗಾಂಧಿ ಪುತ್ಥಳಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಕೇಂದ್ರ ಸರ್ಕಾರ ದಮನಕಾರಿ ನೀತಿ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ದೌರ್ಜನ್ಯ ಮೂಲಕ ಹೋರಾಟ ಹತ್ತಿಕುವ ನೀತಿಯನ್ನು ಕೂಡಲೇಕೈಬಿಡಬೇಕೆಂದು ಆಗ್ರಹಿಸಿದ್ರು.