ರಾಯಚೂರು: ಬಿಜೆಪಿ ಪರವಾಗಿ ಮತದಾರರಿಗೆ ಹಣ ಹಂಚಿಕೆ ಮಾಡುವವರನ್ನು ಕೂಡಲೇ ಬಂಧಿಸಿ ಎಂದು ಆಗ್ರಹಿಸಿ ಕಾಂಗ್ರೆಸ್ ವತಿಯಿಂದ ಮಸ್ಕಿ ಚುನಾವಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಹಣ ಹಂಚಿಕೆ ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - Congress protests against BJP
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಬಿಜೆಪಿಯಿಂದ ಹಣ ಹಂಚಿಕೆ ಮಾಡಲಾಗುತ್ತಿದೆ. ಹೀಗಾಗಿ ಕೂಡಲೇ ಹಣ ಹಂಚಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ಪಟ್ಟಣದ ವಾಲ್ಮೀಕಿ ಭವನದಲ್ಲಿದ್ದ ಚುನಾವಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಹಣ ಹಂಚಿಕೆ ಮಾಡಲಾಗುತ್ತಿದೆ. ಹೀಗಾಗಿ ಕೂಡಲೇ ಹಣ ಹಂಚಿಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕರಾದ ಅಮರೇಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಎಂಎಲ್ಸಿ ಎನ್.ಎಸ್.ಬೋಸರಾಜು, ಮಾಜಿ ಶಾಸಕ ಬಾದರ್ಲಿ ಹಂಪನಗೌಡ, ಮಸ್ಕಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಹಾಗೂ ಕಾರ್ಯಕರ್ತರು ಭಾಗಿಯಾಗಿದ್ರು.