ರಾಯಚೂರು:ಜಿಲ್ಲೆಯಲ್ಲಿ ನಡೆದ ಮೂರು ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಬಹುಮತ ಸಾಧಿಸಿದ್ದಾರೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಅಧಿಕಾರ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ತುರುವಿಹಾಳ ಪ.ಪಂ 'ಕೈ' ವಶ:
ಜಿಲ್ಲೆಯ ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣ ಪಂಚಾಯಿತಿಯ ಒಟ್ಟು 14 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-9, ಬಿಜೆಪಿ-2 ಹಾಗೂ ಮೂವರು ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ತುರುವಿಹಾಳ ಕಾಂಗ್ರೆಸ್ನ ಹಾಲಿ ಶಾಸಕ ಬಸನಗೌಡ ತುರುವಿಹಾಳ ಸ್ವಕ್ಷೇತ್ರವಾಗಿದ್ದು, ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಕ್ಷೇತ್ರದಲ್ಲಿ ಅಧಿಕಾರ ಹಿಡಿಯುವಲ್ಲಿ ಸಕ್ಸಸ್ ಕಂಡಿದ್ದಾರೆ.
ಸಿರವಾರ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚು ಸ್ಥಾನ ಪಡೆದಿದ್ದಾರೆ. ಒಟ್ಟು 20 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-9, ಬಿಜೆಪಿ-6, ಜೆಡಿಎಸ್-3 ಹಾಗೂ ಪಕ್ಷೇತರ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದರು.