ಕರ್ನಾಟಕ

karnataka

ETV Bharat / state

ಬಿಸಿಲೂರಿಗೆ ಬೆಂಬಿಡಿದೆ ಕಾಡುತ್ತಿರುವ ಕೊರೊನಾ: ಇಂದು 295 ಕೇಸ್​ ಪತ್ತೆ - ಕೊರೊನಾ ರಾಯಚೂರು

ರಾಯಚೂರು ಜಿಲ್ಲೆಯಲ್ಲಿ ಪ್ರತೀ ದಿನ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ಇಂದೂ 295 ಜನರು ಸೋಂಕಿಗೆ ಒಳಗಾಗಿದ್ದಾರೆ. ಇಂದಿನದ್ದು ಸೇರಿ ಒಟ್ಟು 3,588 ಕೊರೊನಾ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದೆ.

Raichuru
ರಾಯಚೂರು

By

Published : Aug 8, 2020, 8:51 PM IST

ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಸಾಗಿದೆ. ಇಂದು ಒಂದೇ ದಿನ 295 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 3,588ಕ್ಕೆ ತಲುಪಿದೆ.

ರಾಯಚೂರು ತಾಲೂಕಿನಲ್ಲಿ 151, ಮಾನವಿ 23, ಲಿಂಗಸೂಗೂರು 43, ಸಿಂಧನೂರು 73, ದೇವದುರ್ಗ 5 ಪ್ರಕರಣಗಳು ಪತ್ತೆಯಾಗಿದ್ದು, ರಾಯಚೂರು ತಾಲೂಕಿನಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 2,204 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,346 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆ ಕಾರ್ಯ ನಡೆದಿದ್ದು, ರೋಗದ ಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್ ಹಾಗೂ ಒಪೆಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದರೂ ಸಹ ದಿನದಿಂದ ದಿನಕ್ಕೆ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿರುವುದು ಜನತೆಗೆ ಆತಂಕ ತರಿಸಿದೆ.

ABOUT THE AUTHOR

...view details