ಲಿಂಗಸುಗೂರು (ರಾಯಚೂರು): ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕರಡಕಲ್ಲ ಕೋವಿಡ್ ಕೇಂದ್ರದಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿಯೋರ್ವ ಸಿಇಟಿ ಪರೀಕ್ಷೆ ಬರೆದಿದ್ದಾನೆ. ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಉಮಾ ಮಹೇಶ್ವರಿ ವಿಜ್ಞಾನ ಕಾಲೇಜು ಕೇಂದ್ರಗಳಲ್ಲಿ ಇದೇ ಮೊದಲ ಬಾರಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2020 ಆಯೋಜಿಸಲಾಗಿತ್ತು.
ಪ್ರತ್ಯೇಕ ಕೊಠಡಿಯಲ್ಲಿ ಸಿಇಟಿ ಎದುರಿಸಿದ ಕೊರೊನಾ ಸೋಂಕಿತ ವಿದ್ಯಾರ್ಥಿ - CET Examination
ಎರಡು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 589 ಮಂದಿ ನೋಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ 572 ಮಂದಿ ಹಾಜರಾಗಿದ್ದು, 17 ವಿದ್ಯಾರ್ಥಿಗಳು ಗೈರಾಗಿದ್ದರು.
ಪ್ರತ್ಯೇಕ ಕೊಠಡಿಯಲ್ಲಿ ಸಿಇಟಿ ಎದುರಿಸಿದ ಕೊರೊನಾ ಸೋಂಕಿತ
ಎರಡು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 589 ಮಂದಿ ನೋಂದಣಿ ಮಾಡಿಕೊಂಡಿದ್ದರು. ಬೆಳಗಿನ ಪರೀಕ್ಷೆಗೆ 572 ಮಂದಿ ಹಾಜರಾಗಿದ್ದರು. 17 ವಿದ್ಯಾರ್ಥಿಗಳು ಗೈರಾಗಿದ್ದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಬೇಕಿದ್ದ ಹಟ್ಟಿ ಗ್ರಾಮದ ವಿದ್ಯಾರ್ಥಿಗೆ ಕೊರೊನಾ ಸೋಂಕು ಕಂಡುಬಂದಿದ್ದ ಹಿನ್ನೆಲೆ ಇಲ್ಲಿನ ಕರಡಕಲ್ಲ ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿ ಕಲ್ಪಿಸಿ ಪರೀಕ್ಷೆಗೆ ಅನುವು ಮಾಡಿಕೊಡಲಾಗಿತ್ತು.