ರಾಯಚೂರು: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮುಖ್ಯ ದ್ವಾರವನ್ನ ಸಂಫೂರ್ಣವಾಗಿ ಬಂದ್ ಮಾಡಿ ರಾಯರ ದರ್ಶನ ಸ್ಥಗಿತಗೊಳಿಸಲಾಗಿದೆ.
ಕೊರೊನಾ ಭೀತಿ: ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಮುಖ್ಯ ದ್ವಾರ ಬಂದ್ - ಶ್ರೀ ರಾಘವೇಂದ್ರ ಸ್ವಾಮಿ ಮಠ ಕೊರೊನಾ ಸುದ್ದಿ
ದೇಶವಷ್ಟೇ ಅಲ್ಲ ರಾಜ್ಯದಲ್ಲೂ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಇಂದಿನಿಂದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮುಖ್ಯ ದ್ವಾರ ಬಂದ್ ಮಾಡಲಾಗುತ್ತಿದೆ.
ಶ್ರೀ ರಾಘವೇಂದ್ರ ಸ್ವಾಮಿ ಮಠ
ವೈರಸ್ ಹರಡುವ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭಕ್ತರಿಗೆ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ತೀರ್ಥ, ಪ್ರಸಾದ ವ್ಯವಸ್ಥೆಯನ್ನ ಸಹ ಇಂದಿನಿಂದ ಆರೋಗ್ಯ ಇಲಾಖೆ ಸೂಚನೆಯ ಮೇರೆಗೆ ನಿಲ್ಲಿಸಲಾಗಿದೆ. ಹೀಗಾಗಿ ಭಕ್ತರು ಮಂತ್ರಾಲಯಕ್ಕೆ ಬರಬಾರದೆಂದು ಮಠದಿಂದ ವಿನಂತಿ ಮಾಡಿಕೊಳ್ಳಲಾಗಿದೆ.