ಕರ್ನಾಟಕ

karnataka

ETV Bharat / state

ರಾಯಚೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕೊರೊನಾ ಸೋಂಕಿತ ವೃದ್ಧೆ ಸಾವು - ರಾಯಚೂರು ಕೊರೊನಾ ಸೋಂಕಿತ ವೃದ್ಧೆ ಸಾವು

ರಾಜ್ಯದಲ್ಲಿ ಕೋವಿಡ್​ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿಂದು ಓರ್ವ ಸೋಂಕಿತ ವೃದ್ಧೆ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

corona-patient-death-in-raichuru
ಕೊರೊನಾ ಸೋಂಕಿತ ವೃದ್ಧೆ ಸಾವು

By

Published : Jul 10, 2020, 4:44 PM IST

ರಾಯಚೂರು: ಇಂದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

ಲಿಂಗಸುಗೂರು ಮೂಲದ 70 ವರ್ಷದ ವೃದ್ಧೆಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ, ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವೃದ್ಧೆ ಬಿಪಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದ್ದು, ಸದ್ಯ ವೃದ್ಧೆಯ ಸಾವಿಗೆ ಕೊರೊನಾ ಸೋಂಕು ಕಾರಣವಾ ಅಥವಾ ಬೇರೆ ಕಾಯಿಲೆ ಕಾರಣವಾ ಎಂಬುದನ್ನು ತಜ್ಞರ ಸಮಿತಿ ನಿರ್ಧರಿಸಬೇಕಿದೆ.

ಮೃತ ವೃದ್ಧೆ ಶವಸಂಸ್ಕಾರವನ್ನ ಕೋವಿಡ್-19 ಮಾರ್ಗಸೂಚಿ ಅನ್ವಯ ನೇರವೇರಿಸಲು ನಿರ್ಧರಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿನ ಸೋಂಕಿತರ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details